Saturday, January 18, 2025
Homeಅಂತಾರಾಷ್ಟ್ರೀಯಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು: 15,000 ಎಕರೆ ಪ್ರದೇಶಕ್ಕೆ ಬೆಂಕಿ, ಐದು ಮಂದಿ ಸಜೀವ ದಹನ, 1...

ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು: 15,000 ಎಕರೆ ಪ್ರದೇಶಕ್ಕೆ ಬೆಂಕಿ, ಐದು ಮಂದಿ ಸಜೀವ ದಹನ, 1 ಲಕ್ಷ ಮಂದಿ ಸ್ಥಳಾಂತರ

ವಾಷಿಂಗ್ಟನ್‌: ದಕ್ಷಿಣ ಕ್ಯಾಲಿಫೋರ್ನಿಯಾದ ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿ ಕನಿಷ್ಠ 5 ಮಂದಿ ಸಜೀವ ದಹನವಾಗಿರುವ ಬಗ್ಗೆ ವರದಿಯಾಗಿದೆ.

ಸುಮಾರು 15,832 ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, 1,000 ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸುಮಾರು 1 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಇನ್ನೂ ಕೆಲವೆಡೆ ಅಸಂಖ್ಯಾತ ಐಷಾರಾಮಿ ಮನೆಗಳು ಬೆಂಕಿ ಹೊತ್ತಿಕೊಳ್ಳುವ ಭೀತಿಯಲ್ಲಿವೆ ಎಂದು ವರದಿಗಳು ತಿಳಿಸಿವೆ.

ಸಣ್ಣ ಪ್ರಮಾಣದಲ್ಲಿ ಹೊತ್ತಿಕೊಂಡಿದ್ದ ಕಾಡ್ಗಿಚ್ಚು ಮಂಗಳವಾರ ಜನನಿಬಿಡ ಪ್ರದೇಶಗಳಿಗೆ ವ್ಯಾಪಿಸಿದೆ. ನಿಯಂತ್ರಣಕ್ಕೆ ಬಾರದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬುಧವಾರ ಅಗ್ನಿಶಾಮಕ ದಳದ ಬೆಂಕಿ ನಂದಿಸುವ ಕಾರ್ಯ ಬಹುತೇಕ ಯಶಸ್ವಿಯಾಗುವ ಸಾಧ್ಯತೆಗಳಿತ್ತು. ಈ ವೇಳೆ ಚಂಡಮಾರುತ ಗಾಳಿ ಬೀಸಿದ್ದರಿಂದ ಬೆಂಕಿ ಕೆನ್ನಾಲಿಗೆ ಮತ್ತಷ್ಟು ವ್ಯಾಪಿಸಿತು ಎಂದು ವರದಿ ಹೇಳಿದೆ.
ಈ ಕಾಡ್ಗಿಚ್ಚಿನಿಂದ ಸುಮಾರು 50 ಶತಕೋಟಿ ಡಾಲರ್‌ (42,000 ಕೋಟಿ ರೂ.) ಸಂಪತ್ತು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

RELATED ARTICLES
- Advertisment -
Google search engine

Most Popular