ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆದ್ದಿರುವ ಕೋಟ ಶ್ರೀನಿವಾಸ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಇನ್ನು ಆರು ತಿಂಗಳಲ್ಲಿ ಹಿಂದಿ ಮಾತನಾಡಲು ಕಲಿಯುತ್ತೇನೆ ಎಂದಿದ್ದಾರೆ.
ನಾನು ಸಾಮಾನ್ಯ ಮನುಷ್ಯ ಹಿಂದಿ ಗೊತ್ತಿಲ್ಲ ಎಂದಿದ್ದೆ. ಲೆಕ್ಕ ಇಟ್ಟುಕೊಳ್ಳಿ ಆರು ತಿಂಗಳು ಅವಧಿ ಇದೆ. ಹಿಂದಿ ಮಾತನಾಡೋದನ್ನು ಕಲಿಯಲು ಇವತ್ತಿನಿಂದಲೇ ಶುರು ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿ ನನ್ನಂಥ ಸಾಮಾನ್ಯ ಕಾರ್ಯಕರ್ತನಿಗೆ ಅವಕಾಶ ಕೊಟ್ಟದ್ದೇ ಆಶ್ಚರ್ಯ. ಎರಡು ಜಿಲ್ಲೆಯ ನಾಯಕರ ಅವಿಶ್ರಾಂತ ದುಡಿಮೆ ಈ ಗೆಲುವಿಗೆ ಕಾರಣ. ಇದು ಕಾರ್ಯಕರ್ತರ ಗೆಲುವು ಎಂದು ಭಾವಿಸಿದ್ದೇನೆ. ಪಕ್ಷ ಮತ್ತು ಎನ್‍ಡಿಎ ಒಕ್ಕೂಟಕ್ಕೆ ಗೆಲುವನ್ನು ಸಮರ್ಪಿಸುತ್ತೇನೆ ಎಂದು ಹೇಳಿದರು.