ಕಾಸರಗೋಡು: ಬೈಕ್ ಮಗುಚಿಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಹಿಳೆಯ ಪತಿ ಮತ್ತು ಮಗಳು ಗಂಭೀರ ಗಾಯಗೊಂಡಿದ್ದಾರೆ. ಬದಿಯಡ್ಕದ ಉಬ್ರಂಗಳದಲ್ಲಿ ಈ ಘಟನೆ ನಡೆದಿದೆ. 25ರ ಹರೆಯದ ಅನುಷಾ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಮೃತರ ಪತಿ ದಿನೇಶ್ ಮತ್ತು ಅವರ ಪುತ್ರಿ ಶಿವನ್ಯಾ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಬ್ರಂಗಳದ ಬಳಿಯ ಇಳಿಜಾರು ರಸ್ತೆಯಲ್ಲಿ ಬೈಕ್ ಉರುಳಿ ಬಿದ್ದಿದೆ. ಸುಮಾರು 10 ಅಡಿ ಆಳದ ಹೊಂಡಕ್ಕೆ ಬೈಕ್ ಬಿದ್ದಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮೂವರನ್ನೂ ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಬದಿಯಡ್ಕದ ಆಸ್ಪತ್ರೆ ತಲುಪುವಷ್ಟರಲ್ಲಿ ಅನುಷಾ ಸಾವಿಗೀಡಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಸಂಬಂಧಿಕರಿಗೆ ನೀಡಲಾಗಿದೆ. ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.