ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ

0
8

ಮಹಿಳೆಯೊಬ್ಬರನ್ನು ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹದೇವ ಅವರ ಪತ್ನಿ ಭಾಗ್ಯಮ್ಮ (50) ಕೊಲೆಯಾದ ದುರ್ದೈವಿ. ಅವರು ಜಮೀನಿನ ಬಳಿ ತೆರಳಿದ್ದ ಸಂದರ್ಭದಲ್ಲಿ ಗ್ರಾಮದ ದೇವರಕೆರೆ ಸಮೀಪ ಈ ಭೀಕರ ಕೃತ್ಯ ನಡೆದಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಭಾಗ್ಯಮ್ಮ ಅವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಹತ್ಯೆಗೆ ನಿಖರ ಕಾರಣವೇನು ಹಾಗೂ ಕೃತ್ಯ ಎಸಗಿದವರು ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.