ಹಣದ ಸಹಾಯ ಮಾಡುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ

0
32

ಹಾವೇರಿ : 5 ಲಕ್ಷ ರೂಪಾಯಿ ಸಾಲ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ ಅತ್ಯಾಚಾರ ಎಸಗಿದ ಬಳಿಕ ಖಾಸಗಿ ಕ್ಷಣದ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ನಕಲಿ ಪತ್ರಕರ್ತನನ್ನು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ದೀಪಕ್ ಉಪಳೆ ಬಂಧಿತ ಆರೋಪಿ. ಮಹಿಳೆಗೆ 5 ಲಕ್ಷ ರೂ ಸಾಲ ಕೊಡಿಸುವುದಾಗಿ ನಂಬಿಸಿದ್ದ ಆರೋಪಿ ಲಾಡ್ಜ್ ಸೇರಿದಂತೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಖಾಸಗಿ ವಿಡಿಯೋ ಮಾಡಿಕೊಂಡಿದ್ದಾನೆ.

ಬ್ಲಾಕ್ ಮೇಲ್ ಮಾಡಿ ನಿರಂತರ ಲೈಂಗಿಕ ಸಂಪರ್ಕದಲ್ಲಿರುವಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದು, ಸಹಕರಿಸದಿದ್ದರೆ ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here