ಚಿಕ್ಕಮಗಳೂರು: ನಗರದ ಅರಣಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ರೋಗಿಯ ಸಹೋದರಿಗೆ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಳೆ ತಜ್ಞ ವೈದ್ಯ ವೆಂಕಟೇಶ್ ಮೇಲೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮಹಿಳೆ ಹಲ್ಲೆ ಎಸಗಿರುವುದನ್ನು ಖಂಡಿಸಿ ಆಸ್ಪತ್ರೆಯ ಸಿಬ್ಬಂದಿ ಒಪಿಡಿ ಬಂದ್ ಮಾಡಿದ ಘಟನೆ ವರದಿಯಾಗಿದೆ. ನಗರದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯ ವೆಂಕಟೇಶ್ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿ, ಶರ್ಟ್ ಹಿಡಿದು ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿ ರಂಪಾಟ ಮಾಡಿದ ಘಟನೆ ವರದಿಯಾಗಿದೆ.
ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಆಸ್ಪತ್ರೆಗೆ ಬಂದಿದ್ದ ಯುವಕನಿಗೆ ಚಿಕಿತ್ಸೆ ನೀಡುವ ಸಮಯದಲ್ಲಿ ವೈದ್ಯ ವೆಂಕಟೇಶ್ ರೋಗಿ ಅಕ್ಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂಬ ಆರೋಪ ಕೇಳಿಬಂದಿದೆ. ವೈದ್ಯ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆನ್ನಲಾಗಿದ್ದು, ಇದರಿಂದ ಆಕ್ರೋಶಕ್ಕೊಳಗಾದ ರೋಗಿಯ ಅಕ್ಕ ವೈದ್ಯನ ಮೇಲೆ ಹಲ್ಲೆ ನಡೆಸಿದ್ದಾಳೆ. ಘಟನೆ ಖಂಡಿಸಿ ಜಿಲ್ಲಾಸ್ಪತ್ರೆಯ ಒಪಿಡಿ ಬಂದ್ ಮಾಡಿ ನ್ಯಾಯಕ್ಕಾಗಿ ಸಿಬ್ಬಂದಿ ಆಗ್ರಹಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.
ಅವಾಚ್ಯ ಶಬ್ದದಿಂದ ನಿಂದಿಸಿದ್ದಕ್ಕೆ ವೈದ್ಯರಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ | ಒಪಿಡಿ ಬಂದ್ ಮಾಡಿ ಪ್ರತಿಭಟಿಸಿದ ಸಿಬ್ಬಂದಿ
RELATED ARTICLES