‘ಸಬ್ ಕೇ ಸಾಥ್ ಸಬ್ ಕಾ ವಿಕಾಸ್’ ತತ್ವದಡಿ ಎಲ್ಲ ವರ್ಗಗಳ ಕಲ್ಯಾಣಕ್ಕೆ ಕಂಕಣಬದ್ಧರಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸಮಸ್ತ ಮಹಿಳೆಯರ ಭರವಸೆಯ ನಾಯಕರಾಗಿದ್ದಾರೆ.
ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಯೋಚನೆ-ಯೋಜನೆಗಳಿಂದ ‘ದೇಶಕ್ಕೆ ಮೋದಿಯೇ ಗ್ಯಾರಂಟಿ’ ಎನ್ನುವುದನ್ನು ಈಗಾಗಲೇ ಮಹಿಳಾ ಮತದಾರರು ಅರ್ಥೈಸಿಕೊಂಡಿದ್ದು ಮುoದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ ಕ್ಷೇತ್ರದ ನಾರೀ ಶಕ್ತಿ ಮಹತ್ತರ ಕೊಡುಗೆ ನೀಡಲಿದೆ.
ಪ್ರಧಾನಿ ಮೋದಿ ನೇತೃತ್ವದ ಕೇoದ್ರ ಸರಕಾರ ಕಳೆದ 10 ವರ್ಷಗಳ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಮಹಿಳೆಯರ ಅಗತ್ಯತೆಗಳಿಗೆ ತಕ್ಕಂತೆ ವಿನೂತನ ಯೋಜನೆಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏ.14 ಯುಗಾದಿಯ ಶುಭ ದಿನದಂದು ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ‘ಮರಳಿ ಬಂದಿದೆ ಯುಗಾದಿ ಮತ್ತೆ ಬರುವರು ಮೋದಿ’ ಅಭಿಯಾನ ಆರಂಭಗೊಳ್ಳಲಿದ್ದು ಮಹಿಳಾ ಕಾರ್ಯಕರ್ತರು ಮನೆ ಮನೆ ಸಂಪರ್ಕ ನಡೆಸಿ ಮೋದಿ ಸರಕಾರದ ಸಾಧನೆಗಳನ್ನು ಮತ್ತು ದೇಶಕ್ಕೆ ಮೋದಿ ನಾಯಕತ್ವದ ಅಗತ್ಯತೆಯನ್ನು ಮಹಿಳಾ ಮತದಾರರಿಗೆ ಮನವರಿಕೆ ಮಾಡಲಿದ್ದಾರೆ. ಜೊತೆಗೆ
ಜಿಲ್ಲೆಯಾದ್ಯಂತ ಪ್ರತಿ ಬೂತ್ ಗಳಲ್ಲಿ ಮಹಿಳೆಯರ ‘ಶಕ್ತಿ ಚೌಪಾಲ್’ ಕಾರ್ನರ್ ಸಭೆಗಳು ಈಗಾಗಲೇ ಆರಂಭಗೊಂಡಿದ್ದು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ 1,112 ಬೂತ್ ಗಳಲ್ಲಿ ಸುಮಾರು 3,500 ಕಾರ್ನರ್ ಸಭೆಗಳು ನಡೆಯಲಿವೆ.
ಮಂಡಲ ಶಹ ಮಹಿಳಾ ಸಮಾವೇಶಗಳು ಏ.18 ಮತ್ತು 19ರಂದು ನಡೆಯಲಿವೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1,31,430 ಮಂದಿ ಮಹಿಳೆಯರು ಉಜ್ವಲ ಯೋಜನೆಯ ಪ್ರಯೋಜನವನ್ನು ಪಡೆದಿದ್ದಾರೆ. ದೀನದಯಾಳ್ ಅಂತ್ಯೋದಯ ಯೋಜನೆಯಡಿ 1,73,387 ಮಂದಿ ಫಲಾನುಭವಿಗಳಿದ್ದು, ಜಲ್ ಜೀವನ್ ಮಿಷನ್ ಯೋಜನೆಯಡಿ 3,61,476 ಮಂದಿ ಶುದ್ಧ ಕುಡಿಯುವ ನೀರಿನ ಸಂಪರ್ಕವನ್ನು ಹೊಂದಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸುಮಾರು 52,201 ಮನೆಗಳು ನಿರ್ಮಾಣಗೊಂಡಿವೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ 12,02,000 ಮಂದಿ ಫಲಾನುಭವಿಗಳು ಉಚಿತ ಅಕ್ಕಿಯನ್ನು ಪಡೆಯುತ್ತಿದ್ದು, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಸುಮಾರು 80,984 ಶೌಚಾಲಯಗಳು ನಿರ್ಮಾಣಗೊಂಡಿವೆ. 2024ರ ವರೆಗೆ ಕ್ಷೇತ್ರದಾದ್ಯoತ ಒಟ್ಟು 7,74,231 ಎಲ್ಇಡಿ ಬಲ್ಬ್ ಗಳನ್ನು ವಿತರಿಸಲಾಗಿದೆ.
ಕಳೆದ 10 ವರ್ಷಗಳ ಆಡಳಿತಾವಧಿಯಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲದೆ ಸಂಪೂರ್ಣವಾಗಿ ದೇಶದ ಹಿತಕ್ಕಾಗಿ ತನ್ನನ್ನು ಮುಡಿಪಾಗಿಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಕಣ್ಮಣಿಯಾಗಿದ್ದಾರೆ.
ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಸಂಕಲ್ಪವನ್ನು ತೊಟ್ಟಿರುವ ಜಿಲ್ಲೆಯ ನಾರೀ ಶಕ್ತಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಅಂತರದ ಮತಗಳಿಂದ ಗೆಲ್ಲಿಸುವ ಪಣತೊಟ್ಟು ಬದ್ಧತೆಯಿಂದ ಕಾರ್ಯಪ್ರವೃತ್ತರಾಗಿದ್ದಾರೆ.