ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಯಲ್ಲಿ ಮಹಿಳಾ ತಂಡಕ್ಕೆ ಜಯ

0
8

ಮಂಗಳೂರು : ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ಆಯೋಜಿಸಿದ್ದ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಯಲ್ಲಿ ಉಡುಪಿಯ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಬಡ್ಡಿ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಯತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತಂಡ ತರಬೇತಿ ಪಡೆದಿತ್ತು.