ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಗಳೂರಿನ ಯುದ್ಧ ಸ್ಮಾರಕವನ್ನು ಪಾಲಿಕೆಯ ವತಿಯಿಂದ ಅಭಿವೃದ್ಧಿಪಡಿಸಲು ಮಂಗಳೂರಿನ ಪ್ರಥಮ ಪ್ರಜೆ ಮತ್ತು ನಗರದ ಜನಪ್ರತಿನಿಧಿಗಳಿಗೆ ಸಭೆಯಲ್ಲಿ ಪ್ರಸ್ತಾಪ ಮಾಡಿದರು.
ಈ ಸಂದರ್ಭದಲ್ಲಿ ಮ.ನ.ಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಸಚೇತಕರಾದ ಪ್ರೇಮಾನಂದ ಶೆಟ್ಟಿ, ಪ್ರತಿಪಕ್ಷ ನಾಯಕರಾದ ಪ್ರವೀಣ್ ಚಂದ್ರ ಆಳ್ವ, ಮ.ನ.ಪಾ ಆಯುಕ್ತರಾದ ಆನಂದ್, ಪಾಲಿಕೆಯ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಗಣೇಶ್ ಕುಲಾಲ್, ಲೋಹಿತ್ ಅಮೀನ್, ವರುಣ್ ಚೌಟ, ಭರತ್‌ಕುಮಾರ್, ವಿರೋಧ ಪಕ್ಷದ ನಾಯಕ ಪ್ರವೀಣಚಂದ್ರ ಆಳ್ವ, ಮ.ನ.ಪಾ ಸದಸ್ಯರು ಮತು ಅಧಿಕಾರಿಗಳು ಉಪಸ್ಥಿತರಿದ್ದರು.