ನಾಳೆ ಭಾರತ್ ಬಂದ್ಗೆ ಕರೆ ಕೊಡಲಾಗಿದೆ. ಜುಲೈ 9, 2025ರ ಬುಧವಾರ, ಭಾರತದಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ ಅಥವಾ ‘ಭಾರತ್ ಬಂದ್’ನಲ್ಲಿ ಭಾಗವಹಿಸಲಿದ್ದಾರೆ. 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಕರೆ ನೀಡಿರುವ ಈ ಮುಷ್ಕರ ಕೇಂದ್ರ ಸರ್ಕಾರದ “ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ” ನೀತಿಗಳನ್ನು ಪ್ರತಿಭಟಿಸುವ ಗುರಿಯನ್ನು ಹೊಂದಿದೆ.
ನಾಳೆ ಬುಧವಾರ ಭಾರತ್ ಬಂದ್ ಇರುವುದರಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ದಟ್ಟವಾಗಿದೆ. ಬರೋಬ್ಬರಿ 25 ಕೋಟಿಗೂ ಹೆಚ್ಚು ಕಾರ್ಮಿಕರು ನಾಳೆ ಬೀದಿಗಿಳಿದು ಬಂದ್ ನಡೆಸುವ ನಿರೀಕ್ಷೆ ಇದೆ.
ನಾಳಿನ ದೊಡ್ಡ ಪ್ರಮಾಣದ ಪ್ರತಿಭಟನೆಯಿಂದ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ನಿರೀಕ್ಷೆಯಿದೆ. ಈ ಮುಷ್ಕರವು ದೇಶದ ಆರ್ಥಿಕ ಚಟುವಟಿಕೆಗಳ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ. ಹಿಂದ್ ಮಜ್ದೂರ್ ಸಭಾದ ಹರ್ಭಜನ್ ಸಿಂಗ್ ಸಿಧು ಅವರ ಪ್ರಕಾರ, “ಬ್ಯಾಂಕಿಂಗ್, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಕಾರ್ಖಾನೆಗಳು, ಮತ್ತು ರಾಜ್ಯ ಸಾರಿಗೆ ಸೇವೆಗಳ ಮೇಲೆ ಈ ಮುಷ್ಕರ ತೀವ್ರವಾಗಿ ಪರಿಣಾಮ ಬೀರುತ್ತದೆ.