ವಿಶ್ವ ರಕ್ತದಾನಿಗಳ ದಿನಾಚರಣೆ ಮತ್ತು ಅಭಿನಂದನೆ ಸಮಾರಂಭ

0
7

ಮಣಿಪಾಲ:- ಉಡುಪಿ ಜಿಲ್ಲಾ ಆಡಳಿತ ಉಡುಪಿ ಜಿಲ್ಲಾ ಪಂಚಾಯತ್ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ರಕ್ತ ನಿಧಿ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲ್ ಆಯುರ್ವೇದಿಕ್ ಕಾಲೇಜು ಉಡುಪಿ ಲಕ್ಷ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಮತ್ತು ಅತಿ ಹೆಚ್ಚು ರಥದಾನ ಮಾಡಿದ ರಕ್ತದಾನಿಗಳಿಗೆ ಗೌರವ ಸನ್ಮಾನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜೂನ್ 15 ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ.ಹುಬ್ಬಳ್ಳಿ, ಉಡುಪಿ ಜಿಲ್ಲೆಯು ಇತರ ಜಿಲ್ಲೆಗಳಿಗೆ ರಕ್ತದಾನ ವಿಭಾಗದಲ್ಲಿ ಕೂಡ ಮಾದರಿಯಾಗಿದೆ. ರಕ್ತವನ್ನು ಯಾವುದೇ ಲ್ಯಾಬ್ ನಲ್ಲಿ ತಯಾರಿಸಲು ಸಾಧ್ಯವಿಲ್ಲ ಈ ನಿಟ್ಟಿನಲ್ಲಿ ರಕ್ತದಾನಿಗಳು ಅತಿ ಹೆಚ್ಚು ರಕ್ತದಾನ ಮಾಡುವುದರ ಮೂಲಕ ಆರೋಗ್ಯ ಮಾತ್ರವಲ್ಲ ಮತ್ತೊಬ್ಬರ ಆರೋಗ್ಯವನ್ನು ಕಾಪಾಡಬಹುದು ಎಂದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ ವಹಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಚಿದಾನಂದ ಸಂಜು ಎಸ್ ವಿ, ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ, ಮುನಿಯಾಲ್ ಯೋಗ ಮತ್ತು ನ್ಯಾಚುರಪಥಿ ಕಾಲೇಜಿನ ಪ್ರಾಂಶುಪಾಲೆ ಡಾ. ಅಪರ್ಣ ಸುರೇಂದ್ರ ಲಯನ್ಸ್ ಕ್ಲಬ್ ಅಧ್ಯಕ್ಷೆ ತಾರಾ ಆಚಾರ್ಯ,
ಇಲಾಖಾ ಅಧಿಕಾರಿ ಮಹಾಬಲೇಶ್ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅತಿ ಹೆಚ್ಚು ರಕ್ತದಾನ ಮಾಡಿದ ಅಭಿಜಿತ್ ಕೊಠಾರಿ, ರಾಘವೇಂದ್ರ ಪ್ರಭು ಕರ್ವಾಲು, ಸೇರಿದಂತೆ 5 ಜನ ರಕ್ತದಾನ ವಿಭಾಗದ ಸಾಧಕರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here