ರೇಡಿಯೋ ಮಣಿಪಾಲದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ವಿಶೇಷ ಕಾರ್ಯಕ್ರಮ

0
12

*ಆತ್ಮೀಯರೆ, ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಆಗಸ್ಟ್ ತಿಂಗಳ ಮೊದಲ ವಾರ ಆಚರಿಸುವ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.
ಮಣಿಪಾಲ ಮಾಹೆಯ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯಲ್ಲಿ ಗ್ಲೋಬಲ್‌ ಪಬ್ಲಿಕ್ ಹೆಲ್ತ್ ಮತ್ತು ಗೌವರ್ನೆನ್ಸ್ ವಿಭಾಗದ ಮುಖ್ಯಸ್ಥರಾಗಿರುವ ಡಾ. ಆರತಿ ರಾವ್ ಅವರು ವಿಶೇಷ ಮಾಹಿತಿ ನೀಡಲಿದ್ದಾರೆ.
ಇದು ಆಗಸ್ಟ್ 3 ಭಾನುವಾರ ಸಂಜೆ 4.15ಕ್ಕೆ ಪ್ರಸಾರವಾಗಲಿದೆ.‌ ಮತ್ತು ಸೋಮವಾರ ಮಧ್ಯಾಹ್ನ 12.15ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here