ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಆಗಸ್ಟ್ ತಿಂಗಳ ಮೊದಲ ವಾರ ಆಚರಿಸುವ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.
ಹೊನ್ನಾವರದ ಸೈಂಟ್ ಇಗ್ನೇಶಿಯಸ್ ಇನ್ಟಿಟ್ಯೂಟ್ ಆಫ್ ಹೆಲ್ತ್ ಸಾಯನ್ಸ್ ಇಲ್ಲಿ ಹಿರಿಯ ಪ್ರಾಧ್ಯಾಪಕರಾಗಿರುವ ಡಾ. ಯಶೋದಾ ಸತೀಶ್ ಅವರು ವಿಶೇಷ ಮಾಹಿತಿ ನೀಡಲಿದ್ದಾರೆ. ಇದು ಆಗಸ್ಟ್ 8 ಶುಕ್ರವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಮತ್ತು ಶನಿವಾರ ಮಧ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

