ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ 2026

0
8

ಗ್ರಾಹಕರು ಮೋಸ ವಂಚನೆಗಳ ವಿರುದ್ಧ ಧ್ವನಿಯೆತ್ತಿ ಸತ್ಯ ಪ್ರಾಮಾಣಿಕತೆಗೆ ಪ್ರಾಧಾನ್ಯತೆಯನ್ನು ನೀಡಬೇಕಾಗಿದೆ. ವಸ್ತುಗಳ ಗುಣಮಟ್ಟದ ಖಾತ್ರಿ ಪಡಿಸಿಕೊಂಡು ಅದರ ಸಂಪೂರ್ಣ ತಿಳುವಳಿಕೆಯನ್ನು ಹೊಂದಿ ದಿನಾಂಕಗಳನ್ನು ಸೂಕ್ತವಾಗಿ ಗಮನಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ನುಡಿದರು.

ಅವರು ಮಾರ್ಚ್ 17 ರಂದು ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಗ್ರಾಹಕರ ವ್ಯಾಜ್ಯ ವಿಲೇವಾರಿ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಗ್ರಾಹಕ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ವೇದಿಕೆಯಲ್ಲಿ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹ ನಿರ್ದೇಶಕಿ, ಪ್ರಾಂಶುಪಾಲೆ ಪುಷ್ಪಲತಾ ಎಚ್ ಕೆ, ಒಕ್ಕೂಟದ ಉಪಾಧ್ಯಕ್ಷ ಎಡ್ವಿನ್ ಡಿ ಮೆಲ್ಲೊ ಕಿನ್ನಿಗೋಳಿ, ನ್ಯಾಯವಾದಿ ರಾಘವೇಂದ್ರ ರಾವ್, ವಿಶ್ವವಿದ್ಯಾಲಯ ಕಾಲೇಜಿನ ಯತೀಶ್, ಹಾಜರಿದ್ದರು.

ಒಕ್ಕೂಟದ ಅಧ್ಯಕ್ಷೆ ಸುನಂದ ಕುಂಬ್ಳೆ ಸ್ವಾಗತಿಸಿದರು. ಗೌರವಾಧ್ಯಕ್ಷ ಎಂಜೆ ಸಾಲಿಯಾನ್ ಪ್ರಾಸ್ತಾವಿಕ ಮಾತನಾಡಿದರು. ಇಂದಿರಾ ಕಾರ್ಯಕ್ರಮ ನಿರ್ವಹಿಸಿದರು. ಸುನಂದ ಡಿಆರ್ ವಂದಿಸಿದರು.

LEAVE A REPLY

Please enter your comment!
Please enter your name here