ಉಡುಪಿ:ವಿಶ್ವ ಪರಿಸರ ದಿನದ ಅಂಗವಾಗಿ ಉಡುಪಿ ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ವತಿಯಿಂದ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಹಕರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ಮಾರುಕಟ್ಟೆ ವ್ಯವಸ್ಥಾಪಕರದ ತಂಝೀಮ್ ಶಿರ್ವ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅರಣ್ಯ ಇಲಾಖೆ ಮೂಡುಬಿದಿರೆ ಪ್ರಥಮ ದರ್ಜೆ ಸಹಾಯಕ ಅರುಣ್ ಕುಮಾರ್ ,ಉಪ ವಲಯ ಅರಣ್ಯ ಅಧಿಕಾರಿ ವಾಸಿಂ ಸಹಕರಿಸಿದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.