ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ಇಲ್ಲಿ ಇಂದು ಸೋನ್ಸ್ ಫಾರಂನ ಐ.ವಿ. ಸೋನ್ಸ್ ಇವರ ಅಧ್ಯಕ್ಷತೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಇಂದು ಗಿಡ ನೆಡುವುದರ ಮೂಲಕ ಆಚರಿಸಲಾಯಿತು.
ಪರಿಸರ ಕಾಳಜಿಯ ಬಗ್ಗೆ ತಿಳಿಸುತ್ತಾ ಗಿಡ ನೆಡುವ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ ಅಕ್ಷರ ದಾಸೋಹ ಸಿಬ್ಬಂದಿ ಕಸ್ತೂರಿ ಶಾಲಾ ಮುಖ್ಯ ಶಿಕ್ಷಕ ಪ್ರಸನ್ನ ವಿ. ಶೆಣೈ ಉಪಸ್ಥಿತರಿದ್ದು ಕಾರ್ಯಕ್ರಮ ನಡೆಸಿದರು.