ಬೆಂಗಳೂರು; ಬೆಂಗಳೂರಿನ ರಾಜಾಜಿನಗರದ ಇಎಸ್‌ಐಸಿ ವೈದ್ಯಕೀಯ ಕಾಲೇಜಿನಲ್ಲಿ ವಿಶ್ವ ರೋಗಿಗಳ ಸುರಕ್ಷತಾ ದಿನಾಚರಣೆ ಆಯೋಜಿಸಲಾಗಿತ್ತು. ರೋಗಿಗಳ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಜಾಥಾಗೆ ವೈದ್ಯಕೀಯ ಕಾಲೇಜಿನ ಡೀನ್ ಡಾ.ಆರ್.ಸಂಧ್ಯಾ ಚಾಲನೆ ನೀಡಿದರು.
ನರ್ಸಿಂಗ್ ವಿದ್ಯಾರ್ಥಿಗಳು ಒಳಗೊಂಡಂತೆ ಸಿಬ್ಬಂದಿ ಜಾಥ ಮೂಲಕ ರಾಜಾಜಿನಗರ ಮತ್ತಿತರೆ ಪ್ರದೇಶಗಳಲ್ಲಿ ಸಂಚರಿಸಿ ಜನರಲ್ಲಿ ಚಿಕಿತ್ಸೆಯಲ್ಲಿ ಸುರಕ್ಷಿತ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷರಾದ ಡಾ. ಸುಮಂತಾ, ಉಪ ವೈದ್ಯಕೀಯ ಅಧೀಕ್ಷರಾದ ಡಾ. ಯೋಗಾನಂದ, ಚರ್ಮರೋಗ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಎಂ. ಎಸ್ ಗಿರೀಶ್, ಡಾ. ಧನಂಜಯ, ಡಾ. ಅಶೋಕ್ ಕುಮಾರ್ ಸಮಂತ ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿತ್ತು.
ರಾಜಾಜಿನಗರದ ಇಎಸ್‌ಐಸಿ ವೈದ್ಯಕೀಯ ಕಾಲೇಜಿನಲ್ಲಿ ವಿಶ್ವ ರೋಗಿಗಳ ಸುರಕ್ಷತಾ ದಿನ ಆಚರಣೆ
RELATED ARTICLES