ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆಯ ಅಂಗವಾಗಿ, ದಿನಾಂಕ 09-09-2026, ಬುಧವಾರ ಬೆಳಿಗ್ಗೆ 10:00 ಗಂಟೆಗೆ, ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಇವರ ಆಶ್ರಯದಲ್ಲಿ, ಡಾ. ಎ. ವಿ. ಬಾಳಿಗಾ ಸಮುದಾಯ ಆಪ್ತ ಸಮಾಲೋಚನಾ ಮತ್ತು ಮಕ್ಕಳ ಮಾರ್ಗದರ್ಶನ ಕೇಂದ್ರ, ಕಾರ್ಕಳ ಇಲ್ಲಿ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವರ್ಷದ ಧ್ಯೇಯ ವಾಕ್ಯ ” changing the narrative on suicide” with the” call to action start the conversation
” ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಸಂದೀಪ್ ಕುಡ್ವ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಆತ್ಮಹತ್ಯೆ ತಡೆಗಟ್ಟುವಲ್ಲಿ ಪ್ರತಿಯೊಬ್ಬರ ಪಾತ್ರವೂ ಮಹತ್ವದ್ದಾಗಿದೆ. ಮಾನಸಿಕ ಒತ್ತಡ ಅಥವಾ ಸಂಕಷ್ಟದಲ್ಲಿರುವ ವ್ಯಕ್ತಿಯೊಂದಿಗೆ ಮುಕ್ತವಾಗಿ ಮಾತನಾಡುವುದು, ಅವರ ಮಾತುಗಳನ್ನು ಆಲಿಸುವುದು ಹಾಗೂ ಅಗತ್ಯವಿದ್ದಾಗ ಸೂಕ್ತ ಮಾನಸಿಕ ಆರೋಗ್ಯ ಸೇವೆಗಳಿಗೆ ಸಂಪರ್ಕ ಕಲ್ಪಿಸುವುದು ಅತ್ಯಂತ ಮುಖ್ಯ ಆತ್ಮಹತ್ಯೆಯ ಕುರಿತು ಸಮಾಜದಲ್ಲಿರುವ ತಪ್ಪು ನಂಬಿಕೆಗಳನ್ನು ದೂರ ಮಾಡಿ, ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಅವರು ವಹಿಸಿದ್ದರು. ಆಸ್ಪತ್ರೆಯ ಸಿಬ್ಬಂದಿಯಾದ ಶ್ರೀಮತಿ ದಿವ್ಯಾ ಅವರು ಪ್ರಾರ್ಥನೆಯನ್ನು ನೆರವೇರಿಸಿದರು. ಕುಮಾರಿ ವೃಂದ ಅವರು ಸರ್ವರನ್ನು ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಡಾ. ಸಂದೀಪ್ ಕುಡ್ವ ಅವರನ್ನು ಶ್ರೀ ವಿಜಯ್ ಅವರು ಪರಿಚಯಿಸಿದರು.
ಸಭಾ ಕಾರ್ಯಕ್ರಮದ ನಂತರ, “ಆತ್ಮಹತ್ಯೆಯ ಕುರಿತು ಇರುವ ತಪ್ಪು ನಂಬಿಕೆಗಳು” ಎಂಬ ವಿಷಯದ ಕುರಿತು ಆಪ್ತ ಸಮಾಲೋಚಕರಾದ ಶ್ರೀಮತಿ ದೀಪಶ್ರೀ ಅವರು ಹಾಗೂ “ಆತ್ಮಹತ್ಯೆಯ ಲಕ್ಷಣಗಳು ಮತ್ತು ಅದನ್ನು ತಡೆಗಟ್ಟುವ ಮಾರ್ಗಗಳು” ಎಂಬ ವಿಷಯದ ಕುರಿತು ಮನೋಸಾಮಾಜಿಕ ತಜ್ಞರಾದ ಶ್ರೀಮತಿ ವಿದ್ಯಾಶ್ರೀ ಅವರು ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ವಿದ್ಯಾಶ್ರೀ ಅವರು ನಿರೂಪಿಸಿದರು. ಫಾರ್ಮಸಿಸ್ಟ್ ರವಿ ಕೆಡ್ಲಾಯ ಅವರು ವಂದನಾರ್ಪಣೆ ಸಲ್ಲಿಸಿದರು. ಸರ್ಕಾರಿ ನರ್ಸಿಂಗ್ ಕಾಲೇಜು, ಕಾರ್ಕಳ ಇಲ್ಲಿನ ವಿದ್ಯಾರ್ಥಿಗಳು ಹಾಗೂ ಚಿಕಿತ್ಸೆಗೆ ಆಗಮಿಸಿದ ಮಾನಸಿಕ ಆರೋಗ್ಯ ಕೇಂದ್ರದ ಗ್ರಾಹಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.

