ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಂಗಳೂರು, ಇವರುಗಳ ಮಾರ್ಗದರ್ಶನದಲ್ಲಿ, ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ದಿನಾಂಕ:21-6-2024 ನೇ ಶುಕ್ರವಾರ ಸಂಸ್ಥೆಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ” ಯನ್ನು ಆಚರಿಸಲಾಯಿತು.
ಸಂಸ್ಥೆಯ ಸದಸ್ಯರು ಹಾಗೂ ಯೋಗ ಶಿಕ್ಷಕರಾದ ಕುಮಾರ್ ತೋಕೂರು ಇವರು ಮಾತನಾಡಿ ಯೋಗದ ಮಹತ್ವವನ್ನು ವಿವರಿಸಿ ಪ್ರತಿಯೊಬ್ಬರೂ ಯೋಗವನ್ನು ತಮ್ಮ ದಿನನಿತ್ಯದ ಜೀವನ ಕ್ರಮವನ್ನಾಗಿ ರೂಢಿಸಿಕೊಂಡರೆ, ಹಲವಾರು ರೋಗಗಳಿಂದ ದೂರವಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದೆಂದು ಸಲಹೆ ನೀಡಿದರು. ಹಾಗೂ ಒಂದು ಗಂಟೆ ಯೋಗಾಭ್ಯಾಸದ ತರಬೇತಿ ನೀಡಿದರು.ನಂತರ ಸಂಸ್ಥೆಯ ಅಧ್ಯಕ್ಷರಾದ ಜಗದೀಶ್ ಕುಲಾಲ್ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.