Sunday, July 21, 2024
HomeUncategorizedಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆ

ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆ

ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ವತಿಯಿಂದ  ಇಂದು ವಿಶ್ವ ಯೋಗ ದಿನಾಚರಣೆಯನ್ನು ಜಗನ್ನಾಥ ಸಭಾಭವನದಲ್ಲಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಲಿಸ್ ಯೋಗ ತರಬೇತಿ ಕೇಂದ್ರದ ತರಬೇತುದಾರರಾದ ಸುಮನ ಶ್ರೀನಿವಾಸ್ ಯೋಗ ತರಬೇತಿಯನ್ನು ನಡೆಸಿಕೊಟ್ಟರು ಯೋಗದಿಂದ  ಆರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು. ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಪ್ರತಿಮ ವಿ. ಎಸ್ ಇವರು ವಿವಿಧ ಬಗೆಯ ಯೋಗ ಪ್ರತ್ಯಕ್ಷತೆಯನ್ನು ನೀಡಿ ಸಹಕರಿಸಿದರು .                                                ವೇದಿಕೆಯಲ್ಲಿ  ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್,  ನಿರ್ದೇಶಕರಾದ ಎಲ್ ಉಮಾನಾಥ್, ಜಯ ಶೆಟ್ಟಿ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ  ಪ್ರವೀಣ್ ಕುಮಾರ್ , ಲೆಕ್ಕಿಗರಾದ ಅಶ್ವಿನಿ ಕುಮಾರ್  ಹಾಗೂ ಎಲ್ಲಾ ಶಾಖಾ ವ್ಯವಸ್ಥಾಪಕರು,ಸಿಬ್ಬಂದಿಗಳು ಮತ್ತು ದೈನಿಕ ಠೇವಣಿ ಸಂಗ್ರಹಕಾರರು,  ಉಪಸ್ಥಿತರಿದ್ದರು. ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ ಕೆ ಯವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

RELATED ARTICLES
- Advertisment -
Google search engine

Most Popular