ಸಾಹಿತಿ ಹಾಚಿ ಇಟ್ಟಿಗಿ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ ಗೌರವ

0
6

ಮಂಗಳೂರು : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಜನಪ್ರಿಯ ಆಧುನಿಕ ವಚನಕಾರ, ಸುಪ್ರಸಿದ್ಧ ಸಾಹಿತಿ, ದೇವಿ ಆರಾಧಕ ಹಾಗೂ ಕನ್ನಡ ಸಂಘಟಕರಾದ ಹಾಚಿ ಇಟ್ಟಿಗಿ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ ಘೋಷಿಸಲಾಗಿದೆ.

ಜುಲೈ 26ರಂದು ಮಂಗಳೂರಿನ ಕನ್ನಡ ಭವನದಲ್ಲಿ ನಡೆಯಲಿರುವ ‘ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ’ ಹಾಗೂ **’ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’**ದ ಅಂಗವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಹಿತ್ಯ, ಕನ್ನಡ ಭಾಷೆಯ ಬೆಳವಣಿಗೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಮಾಜಮುಖಿ ಸೇವೆಯಲ್ಲಿ ಹಾಚಿ ಇಟ್ಟಿಗಿ ಅವರು ಸಲ್ಲಿಸಿರುವ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಈ ರಾಷ್ಟ್ರೀಯ ಮಟ್ಟದ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here