ಮೆಕ್ಸಿಕೊ: ಖ್ಯಾತ ಮೆಕ್ಸಿಕನ್ ಕುಸ್ತಿಪಟು, ಡಬ್ಲ್ಯೂ ಡಬ್ಲ್ಯೂಇ ಸೂಪರ್‌ಸ್ಟಾರ್ ರೇ ಮಿಸ್ಟೀರಿಯೊ ಜೂನಿಯರ್ ಅವರ ಚಿಕ್ಕಪ್ಪ ರೇ ಮಿಸ್ಟೀರಿಯೊ ಸೀನಿಯರ್ (66) ಅವರು ನಿಧನರಾಗಿದ್ದಾರೆ.
ಡಿಸೆಂಬರ್ 20ರಂದು ಶುಕ್ರವಾರ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ. ಮಿಸ್ಟೀರಿಯೊ ಸೀನಿಯರ್ ಅವರು ಮೆಕ್ಸಿಕೋದಲ್ಲಿನ ಲುಚಾ ಲಿಬ್ರೆ ಕೂಟದಲ್ಲಿ ಖ್ಯಾತಿ ಗಳಿಸಿದ್ದರು. ವರ್ಲ್ಡ್ ವ್ರೆಸ್ಲಿಂಗ್ ಅಸೋಸಿಯೇಷನ್ ಮತ್ತು ಲುಚಾ ಲಿಬ್ರೆ ಎಎಎ ವರ್ಲ್ಡ್ ವೈಡ್ ನಂತಹ ಪ್ರಮುಖ ಸಂಸ್ಥೆಗಳೊಂದಿಗೆ ಚಾಂಪಿಯನ್‌ಶಿಪ್ ಪ್ರಶಸ್ತಿಗಳನ್ನು ಗಳಿಸಿದರು.
ಮಿಸ್ಟೀರಿಯೊ ಅವರ ನಿಜವಾದ ಹೆಸರು ಮಿಗುಯೆಲ್ ಏಂಜೆಲ್ ಲೋಪೆಜ್ ಡಯಾಸ್. ಅವರ ಮರಣದ ವಿಚಾರವನ್ನು ಲುಚಾ ಲಿಬ್ರೆ ತನ್ನ ಎಕ್ಸ್ ಪೋಸ್ಟ್‌ನಲ್ಲಿ ಬಹಿರಂಗಪಡಿಸಿದೆ. ಮಿಸ್ಟೀರಿಯೋ ಸೀನಿಯರ್ ಅವರ ಸೋದರ ಸಂಬಂಧಿ ರೇ ಮಿಸ್ಟೀರಿಯೋ ಅವರು ಡಬ್ಲ್ಯೂಡಬ್ಲ್ಯೂಇ ಕೂಟದಲ್ಲಿ ಪ್ರಸಿದ್ದರಾಗಿದ್ದಾರೆ.