ಯಾದಗಿರಿ ಪ್ರಕರಣ: ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಇಂದು ಸಾವು

0
12

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ದೇವಿಕೆಮ್ಮ ಹೊಟ್ಟಿ (48), ವೆಂಕಮ್ಮ (60), ರಾಮಣ್ಣ ಪೂಜಾರಿ (50) ಮೃತ ದುರ್ದೈವಿಗಳು. 10 ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ತಿಪ್ಪನಟಗಿ ಗ್ರಾಮಸ್ಥರು ವಾಂತಿ-ಭೇದಿಯಿಂದ ಬಳಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ದುರಾದೃಷ್ಟವಶಾತ್ ಸೋಮವಾರ (ಜು. 07) ಚಿಕಿತ್ಸೆ ಫಲಿಸದೆ ಗ್ರಾಮದ ಮೂವರು ಮೃತಪಟ್ಟಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇನ್ನೂ 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ.

ತಿಪ್ಪನಟಗಿ ಗ್ರಾಮಕ್ಕೆ ಸುರಪುರ ತಾಲೂಕು ಆರೋಗ್ಯ ಅಧಿಕಾರಿ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ ಬಿರಾದಾರ ಸೂಚನೆ ಆದೇಶಿಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here