ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ವತಿಯಿಂದ 2026- 2027 ನೇ ಸಾಲಿನ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಯಕ್ಷಗಾನ ತರಬೇತಿ

0
9

ಮಂಗಳೂರು : ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ವತಿಯಿಂದ 2026- 2027 ನೇ ಸಾಲಿನ ಶೈಕ್ಷಣಿಕ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಯಕ್ಷಗಾನ ತರಬೇತಿಯನ್ನು ಯಕ್ಷ ಶಿಕ್ಷಣ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಪ್ರಧಾನ ಕಾರ್ಯದರ್ಶಿ ಗಂಗಾಧರ ಪೂಜಾರಿ ಬಾಳ ಚೇಳೈರು ಕಾಲನಿ ಇವರು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಪಣಂಬೂರು ವಾಸುದೇವ ಐತಾಳ್ ಸಂಚಾಲಕರು ಯಕ್ಷಶಿಕ್ಷಣ ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು, ಇವರು ತನ್ನ ಅನಿಸಿಕೆಗಳನ್ನು ವ್ಯಕ್ತಪಡಿಸಿದರು ಮುಖ್ಯ ಅತಿಥಿಗಳಾಗಿ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಷರಾಜ್ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅನಿಲ್ ಸಾಲ್ಯಾನ್ ಸೂರಿಂಜೆ, ಯಕ್ಷ ಗುರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಪೂರ್ಣಿಮಾ ಯತೀಶ್ ರೈ, ರಿತೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು ಮುಖ್ಯೋಪಾಧ್ಯಾಯರಾದ ಜೇನ್ ಡಿಸೋಜಾ ಎಲ್ಲರನ್ನು ಸ್ವಾಗತಿಸಿದರು, ಸಹ ಶಿಕ್ಷಕಿ ಸುಪ್ರೀಯ ಕಾರ್ಯಕ್ರಮ ನಿರೂಪಿಸಿದರು ಹಾಗೂ ಶಾಲೆಯ ಸಹ ಶಿಕ್ಷಕಿ ಸುಜಯ ಧನ್ಯವಾದ ಗೈದರು.

LEAVE A REPLY

Please enter your comment!
Please enter your name here