Sunday, July 21, 2024
Homeಮಂಗಳೂರುಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ 9 ಮಂದಿ ಕಲಾವಿದರ ತಂಡದ ಯಕ್ಷಗಾನ ಅಭಿಯಾನ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ 9 ಮಂದಿ ಕಲಾವಿದರ ತಂಡದ ಯಕ್ಷಗಾನ ಅಭಿಯಾನ

ಅಮೆರಿಕದಲ್ಲಿ ಪ್ರದರ್ಶನವಾಗಲಿದೆ ಯಕ್ಷಗಾನ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ 9 ಮಂದಿ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ 75 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದು, ಅಮೆರಿಕದ 20 ರಾಜ್ಯದ ಮುಖ್ಯ ನಗರ ಹಾಗೂ ಅಕ್ಕ ಸಮ್ಮೇಳನದಲ್ಲಿ ಪ್ರದರ್ಶನ ನೀಡಲಿದೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಯುಎಸ್‌ ಎ ಘಟಕ ಅಮೆರಿಕಾದಲ್ಲಿ ಯಕ್ಷಗಾನದ ಪ್ರದರ್ಶನದ ಆಯೋಜನೆ ಮಾಡುತ್ತಿದೆ. ತಂಡದಲ್ಲಿ ಹಿಮ್ಮೇಳದ ಕಲಾವಿದರಾಗಿ ಪಟ್ಟ ಸತೀಶ್ ಶೆಟ್ಟಿ ಪದ್ಮನಾಭ ಉಪಾಧ್ಯ, ಚೈತನ್ಯ ಕೃಷ್ಣ ಪದ್ಯಾಣ ಹಾಗೂ ಮುಮ್ಮೇಳದಲ್ಲಿ ಪ್ರೊ. ಎಂ.ಎಲ್. ಸಾಮಗ, ಹರಿನಾರಾಯಣ ಭಟ್ ಎಡನೀರು, ಚಂದ್ರಶೇಖರ ಧರ್ಮಸ್ಥಳ, ಮಹೇಶ ಮಣಿಯಾಣಿ, ಪ್ರಶಾಂತ್ ನೆಲ್ಯಾಡಿ, ಮೋಹನ ಬೆಳ್ಳಿಪಾಡಿ ಸಹಿತ 9 ಮಂದಿಯ ತಂಡ ಸುಮಾರು 75 ದಿವಸಗಳ ಪ್ರವಾಸ ಕೈಗೊಳ್ಳಲಿದೆ ಎಂದು ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪುತ್ತಿಗೆ ಮಠಗಳು, ಕನ್ನಡ ಕೂಟದವರು, ಯಕ್ಷಗಾನ ಸಂಘದವರು, ದೇವಸ್ಥಾನಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡುವರು. ಅಮೆರಿಕದ ಸ್ಯಾನೋಸೆ, ಸಿಯಾಟಲ್, ಫೀನಿಕ್ಸ್ ಲಾಸ್ ಎಂಜಲೀಸ್, ಆಸ್ಟಿನ್, ಹ್ಯೂಸ್ಟನ್, ಡೆಟೈಟ್, ಇಜಾಮ್ಸ್ ವಿಲ್ಲೆ, ಮೇರಿಲ್ಯಾಂಡ್, ಟಂಪಾ, ಮಿಲ್ವಾಕಿ, ಶಾರ್ಲೊಟ್, ರಾಲೆ, ಎಡಿಸನ್, ಕೊಲಂಬಸ್, ಬಾಸ್ಟನ್, ಒರ್ಲಾಂಡೊ, ಅಟ್ಲಾಂಟಾ, ಚಿಕಾಗೋ ಡಲ್ಲಾಸ್, ನ್ಯೂಜೆರ್ಸಿ, ರಿಚ್ಚಂಡ್, ಎಡಿಸನ್ ಮುಂತಾದ ಕಡೆ ಪ್ರದರ್ಶನ ನಡೆಯಲಿದೆ ಎಂದರು.

ಪ್ರೊ. ಎಂ.ಎಲ್. ಸಾಮಗ, ಪದ್ಮನಾಭ ಉಪಾಧ್ಯ, ಚೈತನ್ಯ ಕೃಷ್ಣಪದ್ಯಾಣ, ಹರಿನಾರಾಯಣ ಭಟ್ ಎಡನೀರು, ಚಂದ್ರಶೇಖರ ಧರ್ಮಸ್ಥಳ, ಮಹೇಶ ಮಣಿಯಾಣಿ, ಪ್ರಶಾಂತ್ ನೆಲ್ಯಾಡಿ, ಮೋಹನ ಬೆಳ್ಳಿಪಾಡಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular