ಮೇ 3ರಂದು ಅಂಬಲಪಾಡಿಯಲ್ಲಿ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

0
1

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 2025ನೇ ಸಾಲಿನ ಪ್ರತಿಷ್ಠಿತ ಪಾರ್ಥಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಸಮಾರಂಭ ಮೇ 3ರಂದು ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 4 ಗಂಟೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್​ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸ್ಪೀಕರ್​ ಯು. ಟಿ. ಖಾದರ್​ ಫರೀದ್​ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಮತ್ತು ಸಂಸತಿ ಇಲಾಖೆ ಸಚಿವ ಶಿವರಾಜ್​ ಎಸ್​. ತಂಗಡಗಿ ಕೃತಿಗಳನ್ನು ಬಿಡುಗಡೆಗೊಳಿಸಲಿದ್ದಾರೆ. ಶಾಸಕ ಯಶ್​ಪಾಲ್​ ಎ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನಿಲ್​ ಕುಮಾರ್​, ಗುರೂರಾಜ್​ ಶೆಟ್ಟಿ ಗಂಟಿಹೊಳೆ, ಗುರ್ಮೆ ಸುರೇಶ್​ ಶೆಟ್ಟಿ, ಕಿರಣ್​ ಕೊಡ್ಗಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಪ್ರಶಸ್ತಿ ಪುರಸತರು
ಡಾ. ಕೆ. ಎಂ. ರಾಘವ ನಂಬಿಯಾರ್​ ಅವರಿಗೆ ಈ ಬಾರಿಯ ಅತ್ಯುನ್ನತ ಪಾರ್ಥಿಸುಬ್ಬ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ರೆಂಜಾಳ ರಾಮಕೃಷ್ಣ ರಾವ್​, ವಿಷ್ಣು ಮಂಜಪ್ಪ ಆಚಾರಿ ಬಳ್ಕೂರು, ಡಿ. ಮನೋಹರ್​ ಕುಮಾರ್​, ಮುರಲಿ ಕಡೆಕಾರ್​ ಮತ್ತು ರಮೇಶ್​ ಅವರಿಗೆ ಅಕಾಡೆಮಿ ಗೌರವ ಪ್ರಶಸ್ತಿ ಲಭಿಸಿದೆ. ಸಣ್ಣಮಲ್ಲಯ್ಯ, ಲಕ್ಷ್ಮಣ ಗೌಡ ಬೆಲಾಲ್​, ದಾಸಪ್ಪ ಗೌಡ ಗೇರುಕಟ್ಟೆ, ಎ. ಬಿ. ನಾಗರಾಜು, ದಾಸನಡ್ಕ ರಾಮ ಕುಲಾಲ್​, ರಾಜೀವ ಶೆಟ್ಟಿ ಹೊಸಂಗಡಿ, ಕೇಶವ ಶಕ್ತಿನಗರ, ಸದಶಿವ ಕುಲಾಲ್​, ಬೆಳ್ಳಾರೆ ಮಂಜುನಾಥ ಭಟ್​ ಮತ್ತು ಜಿ. ಕೆ. ಶ್ರೀನಿವಾಸ ಸಾಲಿಯಾನ್​ ಅವರಿಗೆ ಯಕ್ಷಸಿರಿ ಪ್ರಶಸ್ತಿ ಸಂದಿದೆ. ದಿ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಸ್ಮರಣಾರ್ಥ ನೀಡುವ ದತ್ತಿನಿಧಿ ಪ್ರಶಸ್ತಿಗೆ ದೇವದಾಸ ರಾವ್​ ಕೊಡ್ಗಿ ಆಯ್ಕೆಯಾಗಿದ್ದಾರೆ. ಅಶೋಕ್​ ಹಾಸ್ಯಗಾರ ಮತ್ತು ಕೆರೆಮನೆ ಶಿವಾನಂದ ಹೆಗಡೆ ಹಾಗೂ ಮಣಿಪಾಲ ಯುನಿವರ್ಸಲ್​ ಪ್ರೆಸ್​ 2024ನೇ ಸಾಲಿನ ಪುಸ್ತಕ ಬಹುಮಾನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 1 ರಿಂದ 3ರವರೆಗೆ ಶ್ರೀ ಲಕ್ಷಿ$್ಮ ಜನಾರ್ದನ ಯಕ್ಷಗಾನ ಕಲಾ ಮಂಡಳಿಯಿಂದ ‘ಬಬ್ರುವಾಹನ ಕಾಳಗ’ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯ ಕೃಷ್ಣಪ್ಪ ಪೂಜಾರಿ ಕಿನ್ಯಾ, ರಿಜಿಸ್ಟ್ರಾರ್​ ನಮ್ರತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here