Saturday, April 19, 2025
Homeಉಜಿರೆಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ವೀರೇಂದ್ರ ಹೆಗ್ಗಡೆ ಸಂತಾಪ

ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ವೀರೇಂದ್ರ ಹೆಗ್ಗಡೆ ಸಂತಾಪ

ನಮ್ಮ  ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು.ಆತ ನಾನು ಮೆಚ್ಚಿದ ಶ್ರೇಷ್ಠ ಕಲಾವಿದರಾಗಿದ್ದು, ಕೇರಳ ಮೂಲದವರಾದರೂ, ಸ್ಪಷ್ಟ ಉಚ್ಛಾರ, ಭಾಷಾಶುದ್ಧಿ ಹಾಗೂ ಪಾತ್ರಗಳಿಗೆ ಜೀವತುಂಬುವ ಕಲೆ ಅವರಲ್ಲಿ ಅದ್ಭುತವಾಗಿತ್ತು. ನೃತ್ಯ, ಅಭಿನಯ ಮತ್ತು ಉತ್ತಮ ವಾಕ್ಪಟುತ್ವದೊಂದಿಗೆ ಅವರು ಕಲಾಭಿಮಾನಿಗಳ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದರು.

ಅವರ ನಿಧನದಿಂದ ಶ್ರೇಷ್ಠ ಯಕ್ಷಗಾನ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ಕಿ-ತಾಳ್ಮೆಯನ್ನಿತ್ತು, ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.

RELATED ARTICLES
- Advertisment -
Google search engine

Most Popular