ಉಜಿರೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಶಾಖೆಯ ಆಶ್ರಯದಲ್ಲಿ ಶನಿವಾರ ಬೆಳ್ತಂಗಡಿಯಲ್ಲಿ ಅಂಬೇಡ್ಕರ್‌ಭವನದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ನಡೆಸಲಾಯಿತು.
ನಾವು ನಿತ್ಯವೂ ಕನ್ನಡ ಭಾಷೆಯನ್ನು ಬಳಸಿ, ಉಳಿಸಿ, ಬೆಳೆಸಬೇಕು ಎಂದು ನಾರಾವಿಯ ನಿವೃತ್ತ ಶಿಕ್ಷಕ ವಸಂತ ರಾವ್ ಹೇಳಿದರು.
ಅವರು ಶನಿವಾರ ಬೆಳ್ತಂಗಡಿಯಲ್ಲಿ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಬೆಳ್ತಂಗಡಿ ಶಾಖೆಯ ಆಶ್ರಯದಲ್ಲಿ ಅಂಬೇಡ್ಕರ್‌ಭವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭದಲ್ಲಿ ಮಾತನಾಡಿದರು.
ಯಕ್ಷಗಾನ ಕಲಾವಿದರು ಸ್ಪಷ್ಟ ಉಚ್ಛಾರದೊಂದಿಗೆ ಶುದ್ಧವಾಗಿ, ಕನ್ನಡ ಮಾತನಾಡುತ್ತಿದ್ದು ಅವರ ಭಾಷಾ ಪ್ರಭುತ್ವದ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲಕ್ಕೆ ತಕ್ಕಂತೆ ಆಂಗ್ಲಮಾಧ್ಯಮ ಶಿಕ್ಷಣ ಅನಿವಾರ್ಯವಾದರೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿ ಕನ್ನಡ ಮಾಧ್ಯಮವೇ ಹೆಚ್ಚು ಬಳಕೆಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.
ತಾಲ್ಲೂಕು ಶಾಖೆಯ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು.
ನಿವೃತ್ತ ಮುಖ್ಯೋಪಾಧ್ಯಾಯ ಬಿ. ಸೋಮಶೇಖರ ಶೆಟ್ಟಿ ಮಾತನಾಡಿ, ಸಂಘದ ಕಟ್ಟಡ ನಿರ್ಮಾಣಕ್ಕೆ ಎಲ್ಲಾ ಸದಸ್ಯರು ಸಹಕರಿಸಬೇಕೆಂದು ಕೋರಿದರು.
ಕಟ್ಟಡಕ್ಕೆ ನಿವೇಶನವನ್ನು ದಾನ ನೀಡಿದ ವೀರಮ್ಮ ಅಚ್ಚಿನಡ್ಕ ಅವರನ್ನು ಗೌರವಿಸಲಾಯಿತು.
ಕಾರ್ಯದರ್ಶಿ ಜಗನ್ನಿವಾಸ ರಾವ್ ವರದಿ ಸಾದರಪಡಿಸಿದರು.
ಕೋಶಾಧಿಕಾರಿ ವಿಶ್ವಾಸ ರಾವ್ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷರಾದ ಕುಸುಮಾವತಿ ಸ್ವಾಗತಿಸಿದರು.
ಕಾರ್ಯದರ್ಶಿ ವಸತ ಸುವರ್ಣ ಧನ್ಯವಾದವಿತ್ತರು.

