ಜುಲೈ 18 ರಂದು ಯಕ್ಷರಂಗದಿಂದ ಯಕ್ಷಗಾನ ಪ್ರದರ್ಶನ ಉದ್ಘಾಟನೆ

0
47

ದಾವಣಗೆರೆ : ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ಜುಲೈ 18 ರಂದು ಸಂಜೆ 6 ಗಂಟೆಗೆ ದಾವಣಗೆರೆಯ ವಿದ್ಯಾನಗರ ರಸ್ತೆಯಲ್ಲಿ ಇರುವ ದೃಶ್ಯಕಲಾ ಮಹಾವಿದ್ಯಾಲಯದ ಸಭಾಂಗಣದಲ್ಲಿ “ನಾಗಶ್ರೀ” ಯಕ್ಷಗಾನದ ಪ್ರಸಂಗದ ಉಚಿತ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಯಕ್ಷರಂಗದ ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಯಕ್ಷರಂಗದ ಉದ್ಘಾಟನೆಯನ್ನು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಯಕ್ಷರಂಗ ಸಂಸ್ಥೆಯ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿಯವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿ. ಅಧ್ಯಕ್ಷರಾದ ಸಿ.ಎ.ಉಮೇಶ್ ಶೆಟ್ಟಿ, ಕಲಾಕುಂಚದ ಅಧ್ಯಕ್ಷರಾದ ವಾಸುದೇವ ಎಲ್.ರಾಯ್ಕರ್, ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹಾಲಾಡಿಯ ಖ್ಯಾತ ಯಕ್ಷಗಾನ ಭಾಗವತರಾದ ಜಿ.ರಾಘವೇಂದ್ರ ಮಯ್ಯ, ಕಲಾಕುಂಚದ ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಆಗಮಿಸಲಿದ್ದಾರೆ.

ಶ್ರೀ ಸಕ್ಕಟ್ಟು ಲಕ್ಷ್ಮೀ ನಾರಾಯಣಯ್ಯನವರ ಜನ್ಮ ಶತಮಾನೊತ್ಸವದ ಪ್ರಯುಕ್ತ ಖ್ಯಾತ ಯಕ್ಷಗಾನ ಕಲಾವಿದರಾದ ಕೋಡಿ ವಿಶ್ವನಾಥ ಗಾಣಿಗರವರಿಗೆ ಸ್ಮರಣಿಕೆ ಪ್ರಶಸ್ತಿ ವಿತರಿಸಲಾಗುತ್ತದೆ ಎಂದು ಬಣ್ಣದ ಶ್ರೀ ಸಕ್ಕಟ್ಟು ಲಕ್ಷ್ಮೀ ನಾರಾಯಣಯ್ಯನವರ ಜನ್ಮ ಶತಮಾನೊತ್ಸವ ಸಮಿತಿ ಮುಖ್ಯಸ್ಥರಾದ ರಾಜಶೇಖರ ಎಂ.ಸಕ್ಕಟ್ಟು ಪ್ರಕಟಿಸಿದ್ದಾರೆ.

ಆಧ್ಯಾತ್ಮ ಪರಂಪರೆಯ ಕರ್ನಾಟಕದ ಕರಾವಳಿ ಜಿಲ್ಲೆಯ ದೈವೀಕಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ವೈಭವೀಕರಿಸಿದ ಈ ಕನ್ನಡ ಗಂಡು ಜಾನಪದ ಪ್ರದರ್ಶನಕ್ಕೆ ಯಕ್ಷಗಾನ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಯಕ್ಷಗಾನ ಪ್ರದರ್ಶನವನ್ನು ಯಶಸ್ವಿಗೊಳಿಬೇಕಾಗಿ ಯಕ್ಷರಂಗದ ಪ್ರಧಾನ ಕಾರ್ಯದರ್ಶಿ ಬೇಳೂರು ಸಂತೋಷ್ ಕುಮಾರ ಶೆಟ್ಟಿ ವಿನಂತಿದ್ದಾರೆ.