ಮಂಗಳೂರು: ರಾಜ್ಯ ಮಟ್ಟದಲ್ಲಿ ಲೇಖನ, ಕವನ, ಕಥೆ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ಬರಹದ ಮೂಲಕ ಹಲವಾರು ಬಹುಮಾನಗಳನ್ನು ಪಡೆದ ಹಾಗೂ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಪಡೆದ, ಹಲವಾರು ಚಿತ್ರಗಳಲ್ಲಿ ನಟಿಸಿರುವ ಯಶೋದಾ ಗಾಣಿಗ ಇವರು ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ. ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇವರು ಪ್ರಸ್ತುತ ಅಂಗನವಾಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

