Tuesday, January 14, 2025
Homeಮಡಿಕೇರಿಇಂದು ಯೋಧ ದಿವೀನ್‌ ಅಂತ್ಯಕ್ರಿಯೆ: ಓದಿದ್ದ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಇಂದು ಯೋಧ ದಿವೀನ್‌ ಅಂತ್ಯಕ್ರಿಯೆ: ಓದಿದ್ದ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಮಡಿಕೇರಿ: ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ ಹುತಾತ್ಮರಾಗಿದ್ದು, ಅವರ ಪಾರ್ಥಿವ ಶರೀರ ಹೂಟ್ಟೂರು ತಲುಪಿದೆ.

ಕುಶಾಲನಗದಲ್ಲಿ ದಿವಿನ್ ವಿದ್ಯಾಭ್ಯಾಸ ಮಾಡಿದ್ದ ಜಿಎಂಪಿ ಶಾಲಾ ಮೈದಾನದಲ್ಲಿ ಕೆಲವು ಗಂಟೆಗಳ ಕಾಲ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಬಳಿಕ ಕುಶಾಲನಗರದಿಂದ ನೇರವಾಗಿ ಆಲೂರು ಸಿದ್ದಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಾಗುತ್ತದೆ. ಬಳಿಕ ದಿವಿನ್ ಅವರ ತೋಟದಲ್ಲಿರುವ ಅವರ ತಂದೆ ಸಮಾಧಿ ಪಕ್ಕದಲ್ಲಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

RELATED ARTICLES
- Advertisment -
Google search engine

Most Popular