ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಇಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ನಮ್ಮ ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಸತೀಶ್ ಶೆಟ್ಟಿ ಅವರು ಆಗಮಿಸಿ ಯೋಗದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದರು. ಸಹ ಶಿಕ್ಷಕ ಸುದರ್ಶನ್ ರವರ ಮಾರ್ಗದರ್ಶನದಲ್ಲಿ ಎಲ್ಲಾ ವಿದ್ಯಾರ್ಥಿಗಳು ಯೋಗ ಮಾಡಿದರು. ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ಕೊನೆಯಲ್ಲಿ ಸುದರ್ಶನ್ ಸರ್ ರವರು ಎಲ್ಲರಿಗೆ ಧನ್ಯವಾದ ನೀಡಿದರು.