Saturday, July 20, 2024
Homeಶಿಕ್ಷಣ ಪತ್ರಕರ್ತರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯೋಗಾಭ್ಯಾಸದಿಂದ ಒತ್ತಡ ನಿವಾರಣೆ  - ಸಿಎ ಶಾಂತಾರಾಮ ಶೆಟ್ಟಿ

 ಪತ್ರಕರ್ತರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯೋಗಾಭ್ಯಾಸದಿಂದ ಒತ್ತಡ ನಿವಾರಣೆ  – ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೇವಿಕಾ ಯೋಗ ಕ್ಲಾಸ್ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಇವರ ನೇತ್ರತ್ವದಲ್ಲಿ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ  ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ  ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಉದ್ಘಾಟಿಸಿದರು.
ದಿನವಿಡೀ  ಒತ್ತಡಗಳ ಮಧ್ಯೆ ಕಾರ್ಯ ನಿರ್ವಹಿಸುವ ಪತ್ರಕರ್ತರು  ಯೋಗಾಭ್ಯಾಸಕ್ಕೆ ದಿನದ ಕೆಲವು ತಾಸು ಮೀಸಲಿಡುವ ಮೂಲಕ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಯೋಗದಿಂದ ಆರೋಗ್ಯ ಹಾಗೂ ಜೀವನೋತ್ಸಾಹ  ವೃದ್ಧಿಯಾಗಿ ಬದುಕು ಹಸನಾಗುತ್ತದೆ ಎಂದು ಅವರು ಹೇಳಿದರು.
ಪತ್ರಕರ್ತರಿಗೆ ಹತ್ತು ದಿನಗಳ ಉಚಿತ ಆರೋಗ್ಯ ಶಿಬಿರ ನಡೆಸಿದ ದೇವಿಕಾ ಪುರುಷೋತ್ತಮ್ ಅವರನ್ನು ಇದೇ ಸಂದರ್ಭ  ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ದಯಾ ಕುಕ್ಕಾಜೆ, ಹಿರಿಯ ಪತ್ರಕರ್ತರಾದ ವಿದ್ಯಾಧರ ಶೆಟ್ಟಿ, ಗಿರಿಧರ ಶೆಟ್ಟಿ, ಮಂಗಳೂರು ಸಿಟಿ ರೋಟರಾಕ್ಟ್ ಕ್ಲಬ್ ಕಾರ್ಯದರ್ಶಿ ವರುಣ್ .ಬಿ.ರೈ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

RELATED ARTICLES
- Advertisment -
Google search engine

Most Popular