ಯೋಗ ಆತ್ಮವಿಶ್ವಾಸದೊಂದಿಗೆ ಸಮತೋಲನ ಸಾಧಿಸುವ ಜೀವನ- ಲಲಿತಾ ಕಲ್ಲೇಶ್

0
51

ದಾವಣಗೆರೆ : ಯೋಗವು ಕೇವಲ ದೈಹಿಕ ವ್ಯಾಯಾಮಕ್ಕೆ ಸೀಮಿತವಲ್ಲ ಪ್ರಾಣಾಯಾಮದೊಂದಿಗೆ ಮಾನವನ ಮನಸ್ಸು ಪುಳಕಿತವಾಗುತ್ತದೆ. ಯೋಗಾಸನ ಆತ್ಮವಿಶ್ವಾಸದ ಜೊತೆಗೆ ಖಿನ್ನತೆ ಮನಸ್ಸು ಬಿಟ್ಟು ಸೇವಾ ಮನೋಭಾವನೆಯ ಸಮತೋಲನ ಸಾಧಿಸುವ ಜೀವನ ಎಂದು ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಲಲಿತಾ ಕಲ್ಲೇಶ್ ತಮ್ಮ ಮನದಾಳದ ಮಾತು ವ್ಯಕ್ತಪಡಿಸಿದರು.

ದಾವಣಗೆರೆಯ ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್, ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಕಲಾಕುಂಚ ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯೋಗದ ಬಗ್ಗೆ ಐತಿಹಾಸಿಕ ಪರಂಪರೆಗಳನ್ನು ವಿವರ ವ್ಯಕ್ತಪಡಿಸಿದರು. ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಸ್ತಾವನೆಯಾಗಿ ಮಾತನಾಡಿದರು. ಯೋಗ ಶಿಕ್ಷಕಿಯರಾದ ಸಂಧ್ಯಾ ಶ್ರೀನಿವಾಸ್ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಸಮಾರಂಭಕ್ಕೆ ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಅಚ್ಚುಕಟ್ಟಾಗಿ ನಿರೂಪಿಸಿ, ಸ್ವಾಗತಿಸಿದರು. ಕೊನೆಯಲ್ಲಿ ವಂದಿಸಿದರು. ಉಚಿತ ಯೋಗ ಶಿಬಿರದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನಾ ಪತ್ರ ವಿತರಿಸಲಾಯಿತು.

LEAVE A REPLY

Please enter your comment!
Please enter your name here