ಮನಸ್ಸು ಮತ್ತು ದೇಹದ ಏಕತೆಯನ್ನು ಸಾರುವುದೇ ಯೋಗ – ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್

0
178


ಮಂಗಳೂರು, ನಗರದ ಮಂಗಳಾದೇವಿ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಮಠದಲ್ಲಿ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಯೋಗ ತರಬೇತಿ ಶಿಬಿರ ಉದ್ಘಾಟನೆಗೊಂಡಿತು. ಬಳಿಕ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಆಶೀರ್ವಚನದಲ್ಲಿ ದೈಹಿಕ ಹಾಗೂ ಮಾನಸಿಕ ಚಿಕಿತ್ಸೆಯು ಯೋಗದ ಬಹುಮುಖ್ಯ ಸಾಧನೆಗಳಲ್ಲಿ ಒಂದು. ಬಳಿಕ ಆಶೀರ್ವಚನ ನೀಡಿದ ಅವರು “ಯೋಗವು ಜೀವನದ ಎಲ್ಲಾ ಅಂಶಗಳ ನಡುವೆ ಸಮತೋಲನವನ್ನು ಸಾಧಿಸುವುದರ ಜೊತೆಗೆ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಸಮಗ್ರ ವಿಧಾನವನ್ನು ಒದಗಿಸುತ್ತದೆ. ಯೋಗವನ್ನು ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಸಮಗ್ರ ವಿಧಾನವನ್ನು ಒದಗಿಸುತ್ತದೆ. ಯೋಗವು ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾಗಿದೆ. ಇದು ಮನಸ್ಸು ಮತ್ತು ದೇಹದ ಏಕತೆಯನ್ನು ಸಾರುತ್ತದೆ. ಚಿಂತನೆ ಮತ್ತು ಕ್ರಿಯೆ; ಸಂಯಮ ಮತ್ತು ನೆರವೇರಿಕೆ; ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಾಮರಸ್ಯ; ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಸಮಗ್ರ ವಿಧಾನ. ಇದು ವ್ಯಾಯಾಮದ ಬಗ್ಗೆ ಅಲ್ಲ, ನಿಮ್ಮೊಂದಿಗೆ, ಜಗತ್ತು ಮತ್ತು ಪ್ರಕೃತಿಯೊಂದಿಗೆ ಏಕತೆಯ ಭಾವವನ್ನು ಕಂಡುಹಿಡಿಯುವುದು. ನಮ್ಮ ಜೀವನಶೈಲಿಯನ್ನು ಬದಲಾಯಿಸುವ ಮೂಲಕ ಮತ್ತು ಪ್ರಜ್ಞೆಯನ್ನು ಸೃಷ್ಟಿಸುವ ಮೂಲಕ, ಅದು ಯೋಗಕ್ಷೇಮಕ್ಕೆ ಸಹಾಯವಾಡುತ್ತದೆ ಎಂಬುದನ್ನು ವಿವರಿಸಿದರು.
ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಶಿಬಿರಾರ್ಥಿಗಳಿಗೆ ಅಂತರಾಷ್ಟ್ರೀಯ ಯೋಗದಿನಾಚರಣೆಯ ಮಾಹಿತಿ ಮತ್ತು ಯೋಗಾಭ್ಯಾಸದಿಂದ ಆಗುವ ಪ್ರಯೋಜನ ಹಾಗೂ ಯೋಗದ ನಿಯಮಗಳನ್ನು ತಿಳಿಸಿದರು. ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಸುಮಾ ಶೆಟ್ಟಿ, ಭಾರತಿ ಯಸ್.ರಾವ್, ಚಂದ್ರಹಾಸ ಬಾಳ ಮತ್ತು ಹರಿಣಿ ಯೋಗ ಕಾರ್ಯಕ್ರಮಕ್ಕೆ ಸಹಕರಿಸಿದರು. ಪ್ರೇಮ, ಶಿವಾನಂದ ಶಾನ್‌ಭೋಗ್ ವೈ, ಕೆ. ತುಕಾರಾಮ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here