ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ದಾವಣಗೆರೆಯ ಯುವ ಕ್ರೀಡಾಪಟು ತನ್ವೀರ್ ಅಹಮದ್ರ ವರನ್ನು “ಕರ್ನಾಟಕ ಮುಕುಟಮಣಿ” ರಾಜ್ಯ
ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹಾಸನದಲ್ಲಿ ಇತ್ತೀಚಿಗೆ ನಡೆದ ರಾಜ್ಯ ಮಟ್ಟದ ಸೀನಿಯರ್ಪ ವರ್ ಲಿಪ್ಟ್ನ ಚಾಂಪಿಯನ್ ಶಿಫ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದು ಕಲ್ಕತ್ತಾದಲ್ಲಿ ನಡೆಯಲಿರುವ ರಾಷ್ಟçಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾದ ಸಾಧನೆಯನ್ನು
ಗುರುತಿಸಿ ಈ ಪ್ರಶಸ್ತಿಗೆ ಭಾಜನರಾರುವ ಇವರಿಗೆ ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್,
ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಸೇರಿದಂತೆ ಪದಾಧಿಕಾರಿಗಳು, ಸರ್ವ ಸದಸ್ಯರು, ಅಭಿಮಾನದಿಂದ
ಅಭಿನಂದಿಸಿದ್ದಾರೆ.