ಸಿಧಿ: ತಾನು ಮದುವೆಯಾಗಬೇಕಿದ್ದ ಹುಡುಗನ ಜತೆ ಹೊರಗೆ ಹೋಗಿದ್ದ ಯುವತಿಯನ್ನು ದುಷ್ಕರ್ಮಿಗಳು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಜತೆಗಿದ್ದ ವ್ಯಕ್ತಿಯನ್ನು ಥಳಿಸಿದ್ದಾರೆ. ಸಾಮೂಹಿಕ ಅತ್ಯಾಚಾರದಲ್ಲಿ ನಾಲ್ವರು ಭಾಗಿಯಾಗಿದ್ದು, ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅರವಿಂದ್ ಶ್ರೀವಾಸ್ತವ ಪಿಟಿಐಗೆ ತಿಳಿಸಿದ್ದಾರೆ.
ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಐದು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ಐದು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಚುರ್ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತೆ ಮಂಗಳವಾರ ಮದುವೆ ನಿಶ್ಚಯವಾಗಿದ್ದ ಹುಡುಗನೊಂದಿಗೆ ಹೊರಗೆ ಹೋಗಿದ್ದರು. ಕಥೌಥಾ ಬಳಿಯ ರಸ್ತೆಬದಿಯಲ್ಲಿ ತಮ್ಮ ಮೋಟಾರ್ ಸೈಕಲ್ ನಿಲ್ಲಿಸಿದ ನಂತರ, ಅವರು ಹತ್ತಿರದ ಬೆಟ್ಟಕ್ಕೆ ಹೋಗಿದ್ದರು.
ಆ ಪ್ರದೇಶದಲ್ಲಿ ಓಡಾಡುತ್ತಿದ್ದ ನಾಲ್ವರು ಇವರನ್ನು ಗಮನಿಸಿದ್ದರು, ಅವರು ಆ ಹುಡುಗನನ್ನು ಹೊಡೆದು, ಓಡಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದರು. ಆರೋಪಿಗಳ ಹಿಡಿತದಿಂದ ತಪ್ಪಿಸಿಕೊಂಡ ನಂತರ, ಯುವತಿ ತನ್ನ ಹುಡುಗನನ್ನು ಸಂಪರ್ಕಿಸಿದ್ದಾಳೆ. ಕೂಡಲೇ ಇಬ್ಬರು ಸೇರಿ ಪೊಲೀಸ್ ಠಾಣೆಗೆ ತೆರಳು ದೂರು ದಾಖಲಿಸಿದ್ದಾರೆ.