ಟೈಲರಿಂಗ್ ಕ್ಲಾಸ್‌ಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವತಿ ನಾಪತ್ತೆ

0
18

ಉಡುಪಿ : ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯಿರುವ ಹೊಲಿಗೆ ತರಬೇತಿ ಕೇಂದ್ರಕ್ಕೆ ತೆರಳಿದ್ದ ಯುವತಿಯೊಬ್ಬರು ಮನೆಗೆ ವಾಪಸಾಗದೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ನಾಪತ್ತೆಯಾಗಿರುವ ಯುವತಿಯನ್ನು ನಗರದ ಎಂಜಿಎಂ ಬಳಿಯ ನಿವಾಸಿ ಭಾಗ್ಯಶ್ರೀ ಶರಣಪ್ಪ ಮಾದರ (21) ಎಂದು ಗುರುತಿಸಲಾಗಿದೆ.

ಸೆ.12ರಂದು ಬೆಳಗ್ಗೆ ಸುಮಾರು 11.30ರ ವೇಳೆಗೆ ಹೊಲಿಗೆ ತರಬೇತಿ ತರಗತಿಗೆ ಹೋಗಿ ಬರುವುದಾಗಿ ಮನೆಯವರಲ್ಲಿ ತಿಳಿಸಿ ಮನೆಯಿಂದ ತೆರಳಿದ್ದರು. ಆದರೆ ಬಳಿಕ ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದಾರೆ ಎಂದು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾಗಿರುವ ಯುವತಿ ಸುಮಾರು 5 ಅಡಿ ಎತ್ತರ, ಸಪೂರ ಶರೀರ ಹಾಗೂ ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯುವತಿಯ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ 0820-2520444, ಉಡುಪಿ ಕಂಟ್ರೋಲ್ ರೂಂ 0820-2526444, ಪೊಲೀಸ್ ನಿರೀಕ್ಷಕರು 9480805408 ಹಾಗೂ ಪೊಲೀಸ್ ಉಪನಿರೀಕ್ಷಕರು 9080805445 ಸಂಖ್ಯೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.