ನಿಶ್ಚಿತಾರ್ಥದ ಮುನ್ನಾದಿನ ಯುವತಿ ನಾಪತ್ತೆ : ಹಾನಗಲ್‌ನಲ್ಲೂ ಕೇಳಿ ಬಂತು ಲವ್‌ಜಿಹಾದ್ ಆರೋಪ

0
22

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥಕ್ಕೂ ಮುನ್ನ ಯುವತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಪ್ರಕರಣ ಸ್ಥಳೀಯವಾಗಿ ಚರ್ಚೆಗೆ ಕಾರಣವಾಗಿದ್ದು, ಕುಟುಂಬದವರು ದೂರು ದಾಖಲಿಸಿದ್ದಾರೆ.

ಗ್ರಾಮದ ಶಂಕ್ರಮ್ಮ ಎಂಬ ಯುವತಿಗೆ ಭಾನುವಾರ ನಿಶ್ಚಿತಾರ್ಥ ನಿಗದಿಯಾಗಿತ್ತು. ಕುಟುಂಬವು ವಿವಾಹದ ಸಿದ್ಧತೆಗಳನ್ನು ಮಾಡಿಕೊಂಡಿದ್ದರೆ, ಮುಂದಿನ ಮೇ 11ರಂದು ಮದುವೆ ದಿನವೂ ನಿಶ್ಚಯವಾಗಿತ್ತು. ಆದರೆ ನಿಶ್ಚಿತಾರ್ಥದ ಹಿಂದಿನ ರಾತ್ರಿ ಯುವತಿ ಅಚಾನಕ್ ಆಗಿ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಯುವತಿಯ ಪೋಷಕರು ಇಬ್ರಾಹಿಂ ನೆಗಳೂರು ಎಂಬ ಯುವಕ ತನ್ನ ಮಗಳನ್ನು ಸಂಪರ್ಕಿಸಿ ಕರೆದೊಯ್ದಿದ್ದಾನೆ ಎಂದು ಆರೋಪಿಸಿ ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಹಿಂದೂ ಸಂಘಟನೆ ಕಾರ್ಯಕರ್ತರು ಇದು ವ್ಯವಸ್ಥಿತ ‘ಲವ್ ಜಿಹಾದ್’ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಪೊಲೀಸರು ಯುವತಿಯನ್ನು ಪತ್ತೆಹಚ್ಚಿ ಕುಟುಂಬಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಇಬ್ರಾಹಿಂ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪರಿಸ್ಥಿತಿ ಕೈಮೀರುವ ಮುನ್ನ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here