ಬೆಂಗಳೂರು: 23 ವರ್ಷದ ಯುವತಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಗರದಲ್ಲಿ ನಡೆದಿದೆ. ಐವರು ದುಷ್ಕರ್ಮಿಗಳು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ನೀಡಿರುವ ದೂರಿನ ಆಧಾರದಲ್ಲಿ ಹೈಗ್ರಾಂಡ್ಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.