ಸುಳ್ಯ | ಶಾಲಾ ಆವರಣದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

0
335

ಸುಳ್ಯ: ಕೊಲೆಗೈದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಇಲ್ಲಿನ ಶಾಲೆಯೊಂದರ ಜಗುಲಿಯಲ್ಲಿ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.
ಇಲ್ಲಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಶಾಲಾ ಜಗುಲಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ತಲೆಗೆ ಕಲ್ಲು ಎತ್ತಿಹಾಕಿ ಕೊಲೆಗೈದಿರುವುದು ಕಂಡುಬಂದಿದೆ. ಮೃತ ಯುವಕನ ವಯಸ್ಸು 25-30 ಎಂದು ಅಂದಾಜಿಸಲಾಗಿದೆ.
ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ಸಹಿತ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here