ಪರ್ಕಳ ಪ್ರೌಢ ಶಾಲೆಯಲ್ಲಿ ಯುವ ಶಕ್ತಿ ಅಭಿಯಾನ

0
35

ಪರ್ಕಳ: ಪರ್ಕಳ ಪ್ರೌಢ ಶಾಲೆ, ಪರ್ಕಳದಲ್ಲಿ ವಲಯ 15ರ ಪ್ರತಿಷ್ಠಿತ ಘಟಕ JCI ಪರ್ಕಳ ವತಿಯಿಂದ ಸ್ವಾಮಿ ವಿವೇಕಾನಂದ ರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ “ಯುವ ಶಕ್ತಿ ಅಭಿಯಾನ” ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


ಕಾರ್ಯಕ್ರಮದ ತರಬೇತಿದಾರರಾಗಿ ವಲಯ ತರಬೇತಿದಾರರಾದ JFP ರಾಘವೇಂದ್ರ ಪ್ರಭು ಕರ್ವಾಲ್ ಅವರು ಭಾಗವಹಿಸಿ, ಸ್ವಾಮಿ ವಿವೇಕಾನಂದರ ಜೀವನ ಹಾಗೂ ಆದರ್ಶಗಳನ್ನು ಒಳಗೊಂಡ ಹತ್ತು ಪ್ರಮುಖ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಯುವ ಪೀಳಿಗೆಗೆ ಶಿಸ್ತು, ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು JCI Parkala ಅಧ್ಯಕ್ಷರಾದ JC HGF ಭರತ್ ಕೆ ಕುಲಾಲ್ ಅವರು ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಆನಂದ ನಾಯ್ಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ JCI PPP ಮರಿಯಪ್ಪ, JFA ಸ್ವರಾಜ್ ಶೆಟ್ಟಿ ಹಾಗೂ Junior Jaycee Chairperson JJC ಧನುಷ್ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿ Jc ನಿತೀಶ್ ನಾಯ್ಕ್ ಅವರು ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಸುಮಾರು 80 SSLC ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here