ಶಿವಮೊಗ್ಗ ಲೋಕಸಭಾ ಚುನಾವಣೆ ಸಂಭಂದ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಇಂದು ದಿನಾಂಕ 27-04-2024 ರಂದು ನಡೆದ “ಯುವ ಕಾರ್ಯಕರ್ತರ ಯುವ ಶಕ್ತಿ ಸಮಾವೇಶ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ , ಉಪಾಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು, ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಭಾರಿಗಳಾದ ರಘುಪತಿ ಭಟ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸಂಧ್ಯಾ ರಮೇಶ್, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ವಿಜಯ್ ಕೊಡವೂರು, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಗಜೇಂದ್ರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.