ಯುವವಾಹಿನಿ ಬಂಟ್ವಾಳ ಘಟಕ; ಆ. 10ರಂದು ಆಟಿಡೊಂಜಿ ಕೂಟ

0
223

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಅಗಸ್ಟ್ 10 ಆದಿತ್ಯವಾರದಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಟಿಡೊಂಜಿ ಕೂಟ ನಡೆಯಲಿದೆ.

ಬೆಳಗ್ಗೆ ಗಂಟೆ 9.30 ಕ್ಕೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಸಮಾರಂಭ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಅದೇ ದಿನ‌ ಬೆಳಗ್ಗೆ 10 ಗಂಟೆಗೆ ನಡೆಯುವ ಚೆನ್ನೆಮನೆ ಸ್ಪರ್ಧೆಯನ್ನು ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಉದ್ಘಾಟಿಸಲಿದ್ದಾರೆ ಹಾಗೂ ನಲಿಪುಲೆಗಾ ತುಳು ಹಾಡು ನೃತ್ಯ ಸ್ಪರ್ಧೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕರಾದ ಸುಶಾಂತ್ ಕರ್ಕೇರ ಉದ್ಘಾಟಿಸಲಿದ್ದಾರೆ. ಸಾಹಿತಿ ಹಾಗೂ ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ಆಟಿದ ಮದಿಪು ನೀಡಲಿದ್ದಾರೆ.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೊಕೇಶ್ ಕೋಟ್ಯಾನ್ ಕೂಳೂರು, ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ನಿಕಟಪೂರ್ವ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ದ.ಕ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ನಿರ್ದೇಶಕ ರಾಜೇಶ್ ಜಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್ ಚೆನ್ನಪ್ಪ ಕೋಟ್ಯಾನ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಬಂಟ್ವಾಳ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಪೂಜಾರಿ ಬಜ, ವಕೀಲರಾದ ಮಿತೇಶ್ ಪೂಜಾರಿ, ಉದ್ಯಮಿಗಳಾದ ಸಂಜೀವ ಪೂಜಾರಿ ಗುರುಮಂದಿರ, ಪ್ರಕಾಶ್ ಅಂಚನ್, ಪುನೀತ್, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎಂದು ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಮಧುಸೂದನ್ ಮದ್ವ, ಸಂಚಾಲಕರಾದ ನವೀನ್ ಕಾರಾಜೆ, ವಿಕ್ರಮ್ ಶಾಂತಿ ಹಾಗೂ ಶೈಲಜಾ ಹರೀಶ್ ಕುದನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here