Sunday, March 23, 2025
Homeಬಂಟ್ವಾಳಯುವವಾಹಿನಿ ಪರಿವರ್ತನೆಯ ದಾರಿದೀಪ : ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್

ಯುವವಾಹಿನಿ ಪರಿವರ್ತನೆಯ ದಾರಿದೀಪ : ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್

ಬಂಟ್ವಾಳ : ಯುವವಾಹಿನಿ ಸಂಸ್ಥೆಯು ಪರಿವರ್ತನೆಯ ದಾರಿದೀಪವಾಗಿದೆ, ಸದಾ ಹೊಸತನದ ಮೂಲಕ ಎಲ್ಲರನ್ನೂ ಆಕರ್ಷಿಸುವ ಯುವವಾಹಿನಿ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್ ತಿಳಿಸಿದರು.

ಅವರು ದಿನಾಂಕ 21.07.2024 ನೇ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿಕರ್ನಾಟಕ ರಾಜ್ಯೊತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಯುವವಾಹಿನಿ ಸದಸ್ಯರಿಗೆ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ತರಬೇತುದಾರ ಅಭಿಜಿತ್ ಕರ್ಕೇರ ವಿವಿಧ ಚಟುವಟಿಕೆಗಳ ಮೂಲಕ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ದಿನೇಶ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು.

ವ್ಯಕ್ತಿತ್ವ ವಿಕಸನ ನಿರ್ದೇಶಕ ರಾಜೇಂದ್ರ ಪಲ್ಲಮಜಲು , ಸಲಹೆಗಾರ ಟಿ.ಶಂಕರ ಸುವರ್ಣ ಉಪಸ್ಥಿತರಿದ್ದರು.

ಸುಮಾರು 75 ಸದಸ್ಯರು ವಿವಿಧ ಚಟುವಟಿಕೆಗಳ ಮೂಲಕ ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ದಿನೇಶ್ ಸುವರ್ಣ ಸ್ವಾಗತಿಸಿದರು, ದ್ವಿತೀಯ ಉಪಾಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಲೆ ಹಾಗೂಸಾಹಿತ್ಯ ನಿರ್ದೆಶಕ ಲೋಹಿತ್ ಬಂಟ್ವಾಳ ಅತಿಥಿಗಳನ್ನು ಪರಿಚಯಿಸಿದರು, ಜತೆ ಕಾರ್ಯದರ್ಶಿ ಸುನೀಲ್ ಸಾಲ್ಯಾನ್ ವಂದಿಸಿದರು.

RELATED ARTICLES
- Advertisment -
Google search engine

Most Popular