ಮೂಡುಬಿದಿರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ಬಹುಮಾನ, ವಿದ್ಯಾರ್ಥಿ ವೇತನ, ಸದಸ್ಯರ ಗುರುತಿನ ಚೀಟಿ ವಿತರಣಾ ಸಮಾರಂಭ ಸೆ. 15ರಂದು ನಡೆಯಲಿದೆ. ಮೂಡುಬಿದಿರೆಯ ಬ್ರಹ್ಮಶ್ರೀ ನಾರಾಯಣಸ್ವಾಮಿ ಸೇವಾ ಸಂಘ (ರಿ.)ದಲ್ಲಿ ಕಾರ್ಯಕ್ರಮ ನಡೆಯಲಿದೆ.
ಉದ್ಯಮಿ, ನಿಶ್ಮಿತಾ ಸಮೂಹ ಸಂಸ್ಥೆಯ ಉದ್ಯಮಿ ನಾರಾಯಣ ಪಿ.ಎಂ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ. ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.
ಆ.28ರಂದು ನಡೆದ ಗುರುಸ್ಮರಣೆ ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಹೊಸದಾಗಿ ಸೇರ್ಪಡೆಗೊಂಡ 106 ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಹಾಗೂ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದೆ.