ವರದಿ ರಾಯಿ ರಾಜ ಕುಮಾರ
ಕರ್ನಾಟಕ ಅನುದಾನ ರಹಿತ ಪಿಯು ಕಾಲೇಜುಗಳ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಆಯ್ಕೆಯಾಗಿರುತ್ತಾರೆ. 2022 ರಲ್ಲಿ ಸ್ಥಾಪನೆಗೊಂಡ ಅಸೋಸಿಯೇಷನ್ ಅನುದಾನ ರಹಿತ ಕಾಲೇಜುಗಳ ಹಲವಾರು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಯತ್ನಿಸುತ್ತಿದೆ. ಅಂತಹ ಎಲ್ಲ ಪ್ರಯತ್ನಗಳಿಗೆ ಮತ್ತಷ್ಟು ಹೆಚ್ಚಿನ ಬಲವನ್ನು ನೀಡಲಾಗುವುದು ಎಂದರು.
ಪದಗ್ರಹಣ ಸಮಾರಂಭವು ಓಶಿಯನ್ ಪರ್ಲ್ ಹೋಟೆಲ್ನಲ್ಲಿ ಅಕ್ಟೋಬರ್ 19 ರಂದು ವಿಧಾನಪರಿಷತ್ ಸದಸ್ಯ ಎಸ್ ಎಲ್ ಭೋಜೇಗೌಡ ಅವರ ಸಮಕ್ಷಮ ಉಳಿದ ಪದಾಧಿಕಾರಿಗಳು ಪದಗ್ರಹಣವನ್ನು ಪಡೆಯಲಿದ್ದಾರೆ ಎಂದು ತಿಳಿಸಿದರು.
.

